ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರಕಾರದಿಂದ ಎಲ್ಲಾ ರೀತಿಯ ಸಹಾಯ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ" ಎಂದರು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದಿಲ್ಲ ಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ. 1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು.
Next Story