ಬಡ ಕುಟುಂಬಗಳ ಪಡಿತರ ಚೀಟಿ ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು : ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.
ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
Next Story