ನಾ ಡಿಸೋಜಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ನಾ ಡಿಸೋಜಾ,ಸಿದ್ದರಾಮಯ್ಯ
ಬೆಂಗಳೂರು : ಸಾಹಿತಿ ನಾ ಡಿಸೋಜಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ.
ಸಾಹಿತ್ಯ, ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ ಎಂದು ಹೇಳಿದ್ದಾರೆ.
ನಾ ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ನಾಡಿನ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ನಿಧನದಿಂದ ದುಃಖಿತನಾಗಿದ್ದೇನೆ.ಸಾಹಿತ್ಯ ಕೃಷಿಯ ಜೊತೆಯಲ್ಲಿ ಪರಿಸರ ರಕ್ಷಣೆಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ನಾ.ಡಿಸೋಜಾ ಅವರು ಜನಪರ ಕಾಳಜಿಯ ಲೇಖಕ. ನಾ.ಡಿಸೋಜಾ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/645S6iV6gC
— Siddaramaiah (@siddaramaiah) January 5, 2025
Next Story