ಬೆಂಗಳೂರು | ಪತ್ನಿಯ ಕಿರುಕುಳ ಆರೋಪ : ವ್ಯಕ್ತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಪತ್ನಿಯ ಕಿರುಕುಳದಿಂದಾಗಿ ಬೇಸತ್ತು ಬಾಲರಾಜ್(41) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು, 18 ವರ್ಷದ ಹಿಂದೆ ಪತ್ನಿ ಕುಮಾರಿ ಎಂಬಾಕೆಯನ್ನು ಬಾಲರಾಜ್ ಮದುವೆಯಾಗಿದ್ದರು. ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೂಡ ಮಾಡಲಾಗಿದ್ದು, ಈ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ.
ಗಲಾಟೆ ಬಳಿಕ ಮನೆ ತೊರೆದು ಪತ್ನಿ ತವರು ಸೇರಿದ್ದರು. ಇತ್ತ ಯಾರು ಇಲ್ಲದ ವೇಳೆ ಮನೆಯ ಫ್ಯಾನ್ಗೆ ನೇಣುಬಿಗಿದು ಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story