Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌...

ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ : ಆರ್‌.ಅಶೋಕ್

ವಾರ್ತಾಭಾರತಿವಾರ್ತಾಭಾರತಿ1 May 2024 3:26 PM IST
share
ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ  : ಆರ್‌.ಅಶೋಕ್

ಬೆಂಗಳೂರು‌ : ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ, ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, 8 ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜನರಿಗೆ ತೆರಿಗೆ ಹಾಕಿ ಅವರಿಂದ ವಸೂಲಿ ಮಾಡಿ ನಂತರ ಮಹಿಳೆಯರಿಗೆ ಹಣ ನೀಡುತ್ತೇವೆ ಎಂದು ನಾಟಕವಾಡಿದ್ದಾರೆ. ಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ" ಎಂದರು.

ʼಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ ಕರ್ನಾಟಕಕ್ಕೆ ಒಂದು ಕೋಟಿ ರೂ. ಕೂಡ ಬರ ಪರಿಹಾರ ನೀಡಿಲ್ಲʼ ಎಂದು ದೂರಿದರು.

ರಾಹುಲ್‌ ಗಾಂಧಿ ಎಲ್ಲೇ ಹೋದರೂ ಪಂಗನಾಮ ಸಿಗುತ್ತಿದೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇಲ್ಲವೆಂದೇ ಸಿಎಂ ಸಿದ್ದರಾಮಯ್ಯ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಹಿಂದಿನ ಯುಪಿಎ ಸರ್ಕಾರ ಏನು ಮಾಡಿದೆ ಎಂದು ಜಾಹೀರಾತು ನೀಡಬೇಕಿತ್ತು. ಇದೇ ಕಾಂಗ್ರೆಸ್‌ ದೇಶಕ್ಕೆ ಚೊಂಬು ನೀಡಿತ್ತು. ನಂತರ ಬಂದ ಪ್ರಧಾನಿ ನರೇಂದ್ರ ಮೋದಿ ಶೌಚಾಲಯಗಳನ್ನು ಕಟ್ಟಿಸಿ ಚೊಂಬು ಬಳಸದಂತೆ ಮಾಡಿದರು ಎಂದರು.

ಎಚ್‌ಎಎಲ್‌ ಮುಚ್ಚುತ್ತಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಅದೇ ಎಚ್‌ಎಎಲ್‌ ಈಗ 84 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇಂದು ಎಲ್ಲ ಸಾರ್ವಜನಿಕ ಉದ್ದಿಮೆಗಳು ಲಾಭ ಮಾಡುತ್ತಿವೆ. 2022 ರ ವೇಳೆಗೆ 6 ಕೋಟಿ ಹೊಸ ಎಂಎಸ್‌ಎಂಇ ಉದ್ಯಮಗಳು ಸೃಷ್ಟಿಯಾಗಿವೆ. ರೋಜ್‌ಗಾರ್‌ ಯೋಜನೆಯಡಿ 7.5 ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಎಷ್ಟು ಉದ್ಯೋಗ ಸೃಷ್ಟಿಸಿದ್ದಾರೆ ಎಂದು ಹೇಳಲಿ ಎಂದು ಸವಾಲೆಸೆದರು.

ಡಾ.ಬಿ.ಆರ್‌.ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ಇಲ್ಲ. ಕಾಂಗ್ರೆಸ್‌ಗೆ ಮೊದಲೇ ಅಂಬೇಡ್ಕರ್‌ ಬಗ್ಗೆ ಗೌರವವಿಲ್ಲ. ಆದ್ದರಿಂದ ಸಂವಿಧಾನವನ್ನೇ ತಿರುಚಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಪಿತೃಗಳಿಗೆ ತಿಥಿಯಲ್ಲಿ ವಡೆ ಇಡುತ್ತಾರೆ. ಅಂತಹ ಹೆಸರಿನ ಸ್ಯಾಮ್‌ ಪಿತ್ರೋಡಾ ಅವರು, ಜನರ ಪಿತ್ರಾರ್ಜಿತ ಆಸ್ತಿಗಳಿಗೆ ತರ್ಪಣ ಬಿಡಲು ಸಲಹೆ ನೀಡಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ನಮ್ಮದಲ್ಲ ಎಂದಿದೆ, ಆದರೆ ಹೇಳಿಕೆ ಬದಲಿಸಲು ಕಾಂಗ್ರೆಸ್‌ ಹಿರಿಯರೇ ಸೂಚನೆ ನೀಡಿದ್ದಾರೆ ಎಂದರು.

ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು. ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X