ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶ
ಎಂ.ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಸಂಸದ ಪ್ರತಾಪ್ ಸಿಂಹ
ಪ್ರತಾಪ್ ಸಿಂಹ/ ಎಂ.ಲಕ್ಷ್ಮಣ
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿದೆ.
ಅಲ್ಲದೆ, ಜೂನ್ 12 ರಂದು ಖುದ್ದು ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣದ ಹಿನ್ನೆಲೆ
ಬೆಂಗಳೂರು - ಮೈಸೂರು ಹೆದ್ದಾ ರಿ ನಿರ್ಮಾಣದ ಸಮಯದಲ್ಲಿ ಪ್ರತಾಪ್ ಸಿಂಹ ಅಕ್ರಮವಾಗಿ ಹಣ ಸಂಪಾದನೆ ಮಾಡಿದ್ದಾರೆ ಎಂದು ಲಕ್ಷ್ಮಣ ಹೇಳಿಕೆಯನ್ನು ನೀಡಿದ್ದರು. ಸಂಸತ್ ನಲ್ಲಿ ಹೊಗೆ ಬಾಂಬ್ ಸ್ಪೋಟದ ಬಗ್ಗೆಯೂ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಲವು ಆರೋಪ ಮಾಡಿದ್ದರು. ಅಲ್ಲದೆ, ಸಾಕ್ಷಿಯಾಗಿ ಪೆನ್ ಡ್ರೈವ್ ಇರುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಮೊಕದ್ದಮೆ ವಿಚಾರಣೆ ನಡೆಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶೆ ಲತಾ. ಜೆ ಅವರು ಈ ಆದೇಶ ನೀಡಿದ್ದಾರೆ.