ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ 2 ವಾರ ಗಡುವು ವಿಸ್ತರಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಬೆಂಗಳೂರಿನ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಗುರುವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ’ ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.
Next Story