ಬಾಣಂತಿಯರ ಸಾವು ಪ್ರಕರಣ | ಕಂಪೆನಿಯ ವಿರುದ್ಧ ಕ್ರಮ : ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಪೆ ಗುಣಮಟ್ಟದ ಔಷಧಿ ಪೂರೈಸಿದ ಕಂಪೆನಿ ವಿರುದ್ಧ ಮೊಕದ್ದಮೆ ದಾಖಲಿಸಿ ಕಂಪೆನಿಯನ್ನು ಬಂದ್ ಮಾಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬುಧವಾರ ವಿಧಾನಸಭೆಯ ಗಮನ ಸೆಳೆಯುವ ಸೂಚನೆಯಡಿ ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರ ಅವರು ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಕಂಪೆನಿಯ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಮಾಡಿ ಕೇಂದ್ರ ಸರಕಾರದ ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಈ ಪ್ರಕರಣ ಮುಚ್ಚಿ ಹಾಕುವ ಪ್ರಶ್ನೆಯೆ ಇಲ್ಲ. ಕಂಪೆನಿಗೆ ಇವರೆಗೂ ಸರಕಾರ ಯಾವುದೇ ರೀತಿಯಲ್ಲಿಯೂ ಹಣ ಪಾವತಿಸಿಲ್ಲ. ಅವರ ವಿರುದ್ದ ಕಾನೂನು ಪ್ರಕಿಯೆ ನಡೆಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
Next Story