ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳಿಗೆ ಕೇಂದ್ರದಿಂದ ಅನ್ಯಾಯ: ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ‘ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟ ಮಾಡುತ್ತಿವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಕುಂಭಕೋಣಂನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೇಂದ್ರ ಸರಕಾರ ಬಿಜೆಪಿ ಸರಕಾರ ಆಡಳಿದಲ್ಲಿ ಇಲ್ಲದ ರಾಜ್ಯಗಳ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಕೇಂದ್ರಕ್ಕೆ ನಾವು ನೀಡುವ ತೆರಿಗೆಗೆ ತಕ್ಕನಾಗಿ ನಮಗೆ ಅನುದಾನ ಬರುತ್ತಿಲ್ಲ. ಈ ವಿಚಾರದಲ್ಲಿ ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಬೇಕಿದೆʼ ಎಂದು ತಿಳಿಸಿದರು.
Next Story