ಕೇಂದ್ರದವರು ತನಿಖೆ ಮಾಡಲಿ, ನಟಿ ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರ ಕೈವಾಡವೂ ಇಲ್ಲ: ಡಿ.ಕೆ. ಶಿವಕುಮಾರ್

ಡಿ.ಕೆ.ಶಿವಕುಮಾರ್
ಬೆಂಗಳೂರು : ನಟಿ ರನ್ಯಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ಖಾಸಗಿ ಹೊಟೇಲ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಮಾಡಲಿ ಎಂದರು.
Next Story