ರಾಷ್ಟ್ರೀಯ ಮತದಾರರ ದಿನಾಚರಣೆ-2025 | ಮೊದಲನೆ ಬಾರಿ ಮತದಾನ ಮಾಡುವ ಮತದಾರರಿಗೆ ಗುರುತಿನ ಚೀಟಿ ವಿತರಣೆ

ಬೆಂಗಳೂರು : ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಶೇಷಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತದಾರರ ಗುರುತಿನ ಚೀಟಿಯನ್ನು ವಿತರಿಸಿದ್ದಾರೆ.
ಶನಿವಾರ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಭಾರತ ಚುನಾವಣಾ ಆಯೋಗ ಕರ್ನಾಟಕ ವತಿಯಿಂದ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ-2025’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮತದಾನ ಗುರುತಿನ ಚೀಟಿ ವಿತರಿಸಿ, ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಇದೆ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ಕೆಲಸಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಬಿಬಿಎಂಪಿ ಮುಖ್ಯಆಯುಕ್ತ ತುಷಾರ್ ಗಿರಿನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕುರುಮರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್ ವಸ್ತ್ರದ್ ಮತ್ತಿತರರು ಉಪಸ್ಥಿತರಿದ್ದರು.