Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸುಳ್ಳು ದೂರು ದಾಖಲಿಸುವುದು ದೊಡ್ಡ ಪಾಪ:...

ಸುಳ್ಳು ದೂರು ದಾಖಲಿಸುವುದು ದೊಡ್ಡ ಪಾಪ: ಪೋಕ್ಸೊ ಕಾಯ್ದೆ ದುರ್ಬಳಕೆ ಕುರಿತು ಪೋಷಕರಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Feb 2024 7:35 PM IST
share
ಸುಳ್ಳು ದೂರು ದಾಖಲಿಸುವುದು ದೊಡ್ಡ ಪಾಪ: ಪೋಕ್ಸೊ ಕಾಯ್ದೆ ದುರ್ಬಳಕೆ ಕುರಿತು ಪೋಷಕರಿಗೆ ಎಚ್ಚರಿಕೆ ನೀಡಿದ ಹೈಕೋರ್ಟ್

ಬೆಂಗಳೂರು : ಪೋಷಕರ ದುರುದ್ದೇಶಪೂರಿತ ನಡುವಳಿಕೆಗಳನ್ನು ಮಕ್ಕಳ ಮೇಲೆ ಪ್ರಯೋಗ ಮಾಡುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತ ಪಡಿಸಿರುವ ಹೈಕೋರ್ಟ್, ಮಗಳ ಮೇಲೆ ಮಲತಂದೆಯಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬುದಾಗಿ ದಾಖಲಿಸಿದ್ದ ಪ್ರಕರಣ ಮತ್ತದರ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.

ಮಹಿಳೆಯ ಪತಿಯ ವಿರುದ್ಧ ಮೊದಲ ಪತಿ ದಾಖಲಿಸಿದ್ದ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಸಂಸಾದರಲ್ಲಿ ಉಂಟಾಗುವ ಗೊಂದಲದಿಂದ ಪೋಷಕರು ತಮ್ಮ ಸ್ವಂತ ಮಕ್ಕಳ ಮೇಳೆ ಲೈಂಗಿಕ ದೌರ್ಜನ್ಯದ ನಡೆದಿದೆ ಎಂದು ಆರೋಪಿಸಿ ಬಳಿಕ ಮರೆತು ಬಿಡುತ್ತಾರೆ. ಆದರೆ, ಈ ರೀತಿಯ ಪ್ರಕರಣಗಳು ಮಗುವಿನ ಮೇಲೆ ಬೀರುವ ನಕಾರಾತ್ಮಕ ಪರಿಣಾಮ ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಈ ರೀತಿಯ ಆರೋಪ ಮಾಡುವುದಕ್ಕೂ ಮುನ್ನ ಪೋಷಕರು ಆಲೋಚನೆ ಮತ್ತು ಆತ್ಮಾವಲೋಕನಕ್ಕೆ ಒಳಗಾಗಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಈ ರೀತಿಯ ಆರೋಪಗಳು ನಿಜವೇ ಆಗಿದ್ದರೆ, ಕಾನೂನು ತನ್ನ ಕರ್ತವ್ಯ ನಿರ್ವಹಿಸಲಿದೆ. ಆದರೆ ಪ್ರಸ್ತುತ ಪ್ರಕರಣದಲ್ಲಿ ಮಗವಿನ್ನು ವಶಕ್ಕೆ ನೀಡದ ಉದ್ದೇಶಕ್ಕಾಗಿ ಸುಳ್ಳು ದೂರು ದಾಖಲಿಸುವಂತಹ ಬೆಳವಣಿಗೆಗಳಿಗಿಂತಲೂ ದೊಡ್ಡ ಪಾಪ ಮತ್ತೊಂದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಪತ್ನಿ ತನ್ನನ್ನು ತೊರೆದು ಅರ್ಜಿದಾರರನ್ನು ಮದುವೆಯಾದ ತಾಯಿಯೊಂದಿಗೆ ದ್ವೇಷ ಈಡೇರಿಸಿಕೊಳ್ಳಲು ಕಾನೂನುನ್ನು ದುರುಪಯೋಗಪಡಿಸಿಕೊಂಡಿರುವುದು ಸ್ಪಷ್ಟವಾಗಿದೆ. ಮಗುವನ್ನು ದೌರ್ಜನ್ಯದಿಂದ ರಕ್ಷಿಸಲು ಉದ್ದೇಶಿಸಿರುವ ಪೋಕ್ಸೊ ಕಾಯ್ದೆಯನ್ನೂ ದುರ್ಬಳಕೆ ಮಾಡಿಕೊಂಡಿರುವುದು ದುರದೃಷ್ಟಕರ ಸಂಗತಿ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ ಏನು ?

ಪ್ರಕರಣದಲ್ಲಿ ಬಾಲಕಿಯ ತಾಯಿ ಮತ್ತು ಜೈವಿಕ ತಂದೆ 2017 ರಲ್ಲಿ ವಿಚ್ಛೇದನ ಪಡೆದಿದ್ದರು. ಆದರೆ, ಬಾಲಕಿಯ ಕಸ್ಟಡಿ ತಾಯಿಗೆ ನೀಡಲಾಗಿತ್ತು. ತಂದೆಗೆ ಮಗುವನ್ನು ಭೇಟಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಆದರೂ, ಒಪ್ಪಂದದ ಪ್ರಕಾರ, ಪೋಷಕರಲ್ಲಿ ಯಾರಾದರೂ ಒಬ್ಬರು ದೂರದೂರುಗಳಿಗೆ ಪ್ರಯಾಣಿಸುವಾಗ ಬಾಲಕಿ ಪ್ರಯಾಣಿಸದೆ ಮನೆಯಲ್ಲಿರುವ ಪೋಷಕರೊಂದಿಗೆ ಉಳಿಯಬೇಕಾಗಿತ್ತು.

ತಾಯಿ ವಿದ್ಯಾಬ್ಯಾಸಕ್ಕಾಗಿ ವಿದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಮಗಳನ್ನು ಮೂರನೇ ಪತಿ(ಅರ್ಜಿದಾರರ ಬಳಿ ಬಿಟ್ಟಿದ್ದರು). ಇದರಿಂದ ಕೊಪಗೊಂಡಿದ್ದ ಮೊದಲ ಪತಿ ತನ್ನ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆಸಲಾಗಿದೆ ಎಂದು ಆರೋಪಿಸಿ ಮೂರನೇ ಪತಿ ಹಾಗೂ ಪತ್ನಿಯ ಸಂಬಂಧಿಯ ವಿರುದ್ಧ ದೂರು ನೀಡಿದ್ದು, ದೂರಿನ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾಗಿತ್ತು.

ಇದನ್ನು ಪ್ರಶ್ನಿಸಿದ್ದ ಮೂರನೇ ಪತಿ, ತನ್ನ ವಿರುದ್ಧ ಐಪಿಸಿಯ ವಿವಿಧ ಕಲಂಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ದಾಖಲಾದ ಪ್ರಕರಣ ವಿಚಾರಣೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X