ಮಂಡ್ಯ ಕೃಷಿ ವಿವಿ ಸ್ಥಾಪನೆಗೆ ಪರಿಶಿಲನಾ ಸಮಿತಿ ರಚನೆ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್‍ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಿಶೀಲನೆಗಾಗಿ 6 ಜನರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ರಾಜೇಂದ್ರ ಪ್ರಸಾದ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಧಾರವಾಡ ಕೃಷಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್, ಬೆಂಗಳೂರು ಕೃಷಿ ವಿ.ವಿ.ನಿವೃತ್ತ ಕುಲ ಸಚಿವ ಡಾ.ಎ.ಬಿ. ಪಾಟೀಲ್, ಬೆಂಗಳೂರು ಕೃಷಿ.ವಿ.ವಿ ನಿವೃತ್ತ ಆಡಳಿತಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ಆಡಳಿತ ಸುಧಾರಣಾ ಇಲಾಖೆಯ ನಿವೃತ್ತ ಜಂಟಿ ಕಾರ್ಯದರ್ಶಿ ಚಂದ್ರಹಾಸ್ ಜಿ.ತಾಳೂಕರ ಸಮಿತಿಯ ಸದಸ್ಯರಾಗಿದ್ದಾರೆ.
ಧಾರವಾಡ ಕೃಷಿ ವಿವಿ ಶೈಕ್ಷಣಿಕ ನಿರ್ದೇಶಕ ಡಾ.ವಿ.ಆರ್.ಕಿರೇಸೂರ್ ಅವರನ್ನು ಸದಸ್ಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಅಲ್ಲದೆ, ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‍ನಲ್ಲಿ ಮಂಡ್ಯ ವಿಸಿ ಫಾರ್ಮನಲ್ಲಿ ಕೃಷಿ ವಿವಿ ಸ್ಥಾಪನೆ ಕುರಿತು ಪರಿಶೀಲನೆಗೆ ತಜ್ಞರ ಸಮಿತಿ ರಚಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು.