Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಸೇರಿ ಎಲ್ಲೆಡೆ ಗುಡ್ ಫ್ರೈಡೇ...

ಬೆಂಗಳೂರು ಸೇರಿ ಎಲ್ಲೆಡೆ ಗುಡ್ ಫ್ರೈಡೇ ಆಚರಣೆ

ವಾರ್ತಾಭಾರತಿವಾರ್ತಾಭಾರತಿ18 April 2025 11:18 PM IST
share
ಬೆಂಗಳೂರು ಸೇರಿ ಎಲ್ಲೆಡೆ ಗುಡ್ ಫ್ರೈಡೇ ಆಚರಣೆ

ಬೆಂಗಳೂರು : ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು(ಗುಡ್ ಫ್ರೈಡೆ) ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಶುಕ್ರವಾರ ಇಲ್ಲಿನ ಶಿವಾಜಿನಗರದ ಸಂತ ಮೇರಿ ಬೆಸಿಲಿಕಾ, ಎಂ.ಜಿ ರಸ್ತೆಯಲ್ಲಿರುವ ಈ ಸೇಂಟ್ ಮ್ಯಾಕ್ರ್ಸ್ ಕ್ಯಾಥೆಡ್ರಲ್ ಚರ್ಚ್, ಆಲ್ ಪೀಪಲ್ಸ್ ಚರ್ಚ್, ಸೇಂಟ್ ಥಾಮಸ್ ಚರ್ಚ್, ಇನ್ಫೆಂಟ್ ಜೀಸಸ್ ಚರ್ಚ್, ಸೇಂಟ್ ಲ್ಯೂಕ್ಸ್ ಚರ್ಚ್, ಸೇಂಟ್ ಪ್ಯಾಟ್ರಿಕ್ ಚರ್ಚ್ ಸೇರಿದಂತೆ ವಿವಿಧ ಚರ್ಚ್‍ಗಳಲ್ಲಿ ಬೆಳಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ನಡೆಯಿತು.

ಮತ್ತೊಂದೆಡೆ, ಕೆಲವು ಚರ್ಚ್‍ಗಳಲ್ಲಿ ಯೇಸು ಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ಘಟನಾವಳಿಗಳನ್ನು ಪ್ರಸ್ತುತಪಡಿಸಲಾಯಿತು. ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆ ಧರಿಸಿ ಯೇಸು ಕ್ರಿಸ್ತನ ಕೊನೆಯ ಘಳಿಗೆಗಳ ವತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತರಲಾಯಿತು. ತ್ಯಾಗದ ಉಳಿಕೆಯ ಹಣವನ್ನು ಬಡವರಿಗೆ ಹಂಚಲಾಯಿತು.

ಆಯಾ ಚರ್ಚ್‍ಗಳ ಧರ್ಮಾಧ್ಯಕ್ಷರು ಗುಡ್ ಫ್ರೈಡೆ ಸಂದೇಶ ನೀಡಿ, ನ್ಯಾಯದಿಂದ ವಂಚಿತರಾದ ಮುಗ್ಧರ, ಆಸ್ಪತ್ರೆಗಳಲ್ಲಿ ನರಳುತ್ತಿರುವವರ, ಶೋಷಣೆಗೊಳಗಾದ ಜನರ ದುಃಖ ಸಂಕಟಗಳಲ್ಲಿ ಯೇಸುಕ್ರಿಸ್ತರು ನಿತ್ಯ ಶಿಲುಬೆಗೇರುತ್ತಿದ್ದಾರೆ. ಅವರು ಮುಗ್ಧರ ನೋವುಗಳ ಪ್ರತಿರೂಪ ಎಂದರು.

ಜಗತ್ತಿನಾದ್ಯಂತ ಇರುವ ಕೆಟ್ಟತನಕ್ಕೆ ಯೇಸುವಿನ ಪ್ರೀತಿ, ಕರುಣೆ, ಕ್ಷಮೆ, ಔದಾರ್ಯಗಳು ಔಷಧವಾಗಬೇಕು. ಹೊಣೆಗೇಡಿತನ, ಕ್ರೋಧ, ತಿಳಿಗೇಡಿತನಕ್ಕೆ ಯೇಸು ಉತ್ತರವಾಗಿದ್ದಾರೆ. ಯೇಸುಕ್ರಿಸ್ತ ಶಿಲುಬೆಯನ್ನು ಹೊತ್ತು ನಡೆದಂತೆ ನಾವೂ ಜೀವನದಲ್ಲಿ ಎದುರಾಗುವ ಕಷ್ಟ, ಸಾವು, ನೋವು, ಸಂಕಟಗಳನ್ನು ಎದುರಿಸಿ ಮುನ್ನಡೆಬೇಕಿದೆ. ಸ್ವಾರ್ಥ ತ್ಯಜಿಸಿ ಪರರ ಪ್ರೀತಿಯಲ್ಲಿ ಬದುಕಲು ದೇವರು ತೋರಿರುವ ದಾರಿಯೇ ಶಿಲುಬೆಯ ಹಾದಿ ಎಂದು ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X