ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ರಾಜ್ಯ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯ ಶಿಫಾರಸ್ಸಿನಂತೆ, ರಾಜ್ಯ ವಿಧಾನಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿ ಮತ್ತು ವಿಧಾನಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಗ್ರಾಮೀಣಾಭಿವೃದ್ಧಿ ವಿವಿ ಮರು ನಾಮಕರಣ ವಿಧೇಯಕ ಅಂಗೀಕಾರ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ‘ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಎಂದು ಮರು ನಾಮಕರಣ ಮಾಡಲು ಮಂಡಿಸಿದ 2025ನೇ ಸಾಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕಕ್ಕೆ ಗುರುವಾರ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ಲಭಿಸಿತು.
Next Story