ಎಚ್ಎಂಪಿವಿ ಹರಡದಂತೆ ತಡೆಗಟ್ಟಲು ಮಾರ್ಗಸೂಚಿ ಪ್ರಕಟ
ಸಾಂದರ್ಭಿಕ ಚಿತ್ರ (credit: economic times)
ಬೆಂಗಳೂರು : ದೇಶದಲ್ಲಿ ಎಚ್ಎಂಪಿವಿ ಪ್ರಕರಣಗಳಲ್ಲಿ ಯಾವುದೇ ಗಣನೀಯ ಏರಿಕೆ ಕಂಡುಬಂದಿಲ್ಲ. ಆದರೆ ವೈರಸ್ ಅನ್ನು ತಡೆಗಟ್ಟುವ ಕ್ರಮಗಳನ್ನು ಕೇಂದ್ರ ಸರಕಾರವು ಶಿಫಾರಸು ಮಾಡಿದ್ದು, ಅದರಂತೆ ಸಾರ್ವಜನಿಕರು ಮುಂಜಾಗ್ರತಾ ನೈರ್ಮಲ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರಕಾರವು ಮಾರ್ಗಸೂಚಿ ಪ್ರಕಟಿಸಿದೆ.
ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್ ನಿಂದ ಮುಚ್ಚಿಕೊಳ್ಳಬೇಕು. ಆಗಾಗ್ಗೆ ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ನಿಂದ ತೊಳೆಯಬೇಕು.
ಕೆಮ್ಮು ಮತ್ತು ಜ್ವರದಂತಹ ರೋಗಲಕ್ಷಣಗಳನ್ನು ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಹೊರಗೆ ಹೋಗವಾಗ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Next Story