ಡಿಜಿಪಿ ಪೇದೆ ಸ್ಥಾನಕ್ಕೆ ಇಳಿದು ಕೆಲಸ ಮಾಡುತ್ತಿದ್ದಾರೆ : ಎಚ್‍ಡಿಕೆ ಗರಂ
ಬೆಂಗಳೂರು : ನಮ್ಮ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು(ಡಿಜಿಪಿ) ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಸ್ಥಾನಕ್ಕೆ ಇಳಿದು ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಶನಿವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವಿರುದ್ಧ ಮೊಕದ್ದಮೆ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ ಎಂದು ದೂರಿದರು.
ಎಚ್.ಡಿ.ದೇವೆಗೌಡರ ಕುಟುಂಬದಲ್ಲಿ ಎಲ್ಲರನ್ನು ಮುಗಿಸಿದ್ದಿವಿ. ನಿಖಿಲ್ ಒಬ್ಬ ಉಳಿದಿದ್ದಾನೆ. ಅವನನ್ನೂ ಮೊದಲನೆ ಆರೋಪಿ ಮಾಡುಲು ಹೊರಟ್ಟಿದಿರಾ?. ಅಲ್ಲದೆ, ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್‌ಸ್ಟೇಬಲ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಒಂದುವರೆ ವರ್ಷದಿಂದ ಮಾಡಿರುವ ಕೆಲಸ ಬಿಡಿ. ಮುಂದಾದರೂ ಜನರ ಪರವಾಗಿ ಕೆಲಸ ಮಾಡಿ. ಹಿಂದುಳಿದ ವರ್ಗಗಳು ಮೆಚ್ಚುವ ಕೆಲಸ ಮಾಡಿ. ನಿಮ್ಮ ಆರ್ಥಿಕ ಸಲಹೆಗಾರರು ಏನು ಹೇಳಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲವೆಂದು ಹೇಳಿದ್ದಾರೆ. ನಾನು ಆರ್ಥಿಕ ಸಲಹೆಗಾರನಾಗಿದ್ದಕ್ಕೆ ಕ್ಷೇತ್ರದ ಅಭಿವೃದ್ಧಿಗೆ ಹಣ ತಂದಿದ್ದೀನಿ ಎಂದಿದ್ದಾರೆ. ಇನ್ನುಳಿದ ಶಾಸಕರು ಏನು ಮಾಡಬೇಕು. ಇದು ನಾವು ಹೇಳಿಲ್ಲ, ನಿಮ್ಮ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ ಎಂದು ಅವರು ಟೀಕಿಸಿದರು.