ಎಚ್‌ಡಿಕೆ, ಕುಟುಂಬಸ್ಥರಿಂದ ಸರಕಾರಿ ಜಮೀನು ಒತ್ತುವರಿ ಆರೋಪ ; ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಬಳಿ ಸರಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿ ಎಚ್‌ಡಿಕೆ ಹಾಗೂ ಕುಟುಂಬಸ್ಥರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ನೀಡಿದ್ದ ರಿಲೀಫ್ ಅನ್ನು ಹೈಕೋರ್ಟ್ ಮತ್ತೆ ಮುಂದುವರಿಸಿದೆ.
6 ಎಕರೆ ಒತ್ತುವರಿ ತೆರವಿಗೆ ತಹಶೀಲ್ದಾರ್ ನೋಟಿಸ್ ಪ್ರಶ್ನಿಸಿ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್.ಎಸ್. ಸಂಜಯಗೌಡ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ತಹಶೀಲ್ದಾರ್ ವಿಚಾರಣೆ ನಡೆಸದೇ ವರದಿ ಸಲ್ಲಿಸಿದ್ದಾರೆ. ಹೀಗಾಗಿ ರಿಟ್ ಅರ್ಜಿಗೆ ಕೆಲವು ತಿದ್ದುಪಡಿ ಮಾಡಲು ಎಚ್ ಡಿಕೆ ಪರ ವಕೀಲರು ಮನವಿ ಮಾಡಿದರು.
ಹೆಚ್ಚುವರಿ ಆಕ್ಷೇಪಗಳಿದ್ದರೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಎ.4 ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ.
Next Story