ಏರೋ ಇಂಡಿಯಾ ಪ್ರದರ್ಶನ ಹಿನ್ನೆಲೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್ ಶೋ ಹಿನ್ನೆಲೆ ವಿವಿಧ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನಗಳು ಸಾಲು ಸಾಲಾಗಿ ನಿಂತಿದ್ದ ದೃಶ್ಯ ಕಂಡಿತು.
ಏರ್ ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ಇದರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಸಂಚಾರ ದಟ್ಟಣೆಯಿಂದ ಪರದಾಡಿದರು.
ಅದರಲ್ಲೂ, ಬಿಎಸ್‍ಎಫ್ ತರಬೇತಿ ಕೇಂದ್ರದಿಂದ ಯಲಹಂಕಾ ಏರ್ ಫೋರ್ಸ್‍ವರೆಗೂ ಸಂಚಾರ ದಟ್ಟಣೆ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಸಂಚಾರ ದಟ್ಟಣೆ ಉಂಟಾಗಿದೆ ಎಂದು ಹಲವು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.
Next Story