ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ.ನಿಂಬಾಳ್ಕರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಆಯುಕ್ತ ಸುರಳ್ಕರ್ ವಿಕಾಸ ಕಿಶೋರ್ ಅವರು ಹೇಮಂತ್ ನಿಂಬಾಳ್ಕರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ಹೇಮಂತ್ ನಿಂಬಾಳ್ಕರ್ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವಿಶೇಷ ಆಯುಕ್ತ(ಆರೋಗ್ಯ)ರನ್ನಾಗಿ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
Next Story