ಮುತಾಲಿಕ್ ಬಗ್ಗೆ ಮಾನಹಾನಿಕರ ಹೇಳಿಕೆ ಆರೋಪ | ಸುನೀಲ್ ಕುಮಾರ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ದ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಆರೋಪ ಸಂಬಂಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿ.ಸುನೀಲ್ ಕುಮಾರ್ ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
Next Story