ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ : ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐ

ಬೆಂಗಳೂರು : ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿ ಯೂನಿಯನ್ ಬ್ಯಾಂಕ್ ಇಂಡಿಯಾ ಅಧಿಕಾರಿಗಳ ವಿರುದ್ಧ ತನಿಖೆ ಆರಂಭಿಸಿರುವ ಸಿಬಿಐ ತನಿಖೆಯ ಮೂರನೇ ವಸ್ತುಸ್ಥಿತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ.
ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ವರದಿ ಸ್ವೀಕರಿಸಿ, ಅಗತ್ಯ ನಿರ್ದೇಶನಗಳನ್ನು ಫೆ.27ರಂದು ನೀಡಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.
ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಪ್ರಕರಣದ ಕುರಿತಾಗಿ ತನಿಖೆಗೆ ಸಂಬಂಧಿಸಿದ ಮೂರನೇ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ನ್ಯಾಯಾಲಯವು ಕೆಲವು ನಿರ್ದೇಶನಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸಮ್ಮತಿ ಸೂಚಿಸಿದ ಹೈಕೋರ್ಟ್ ಫೆ.27ಕ್ಕೆ ಸೂಕ್ತ ನಿರ್ದೇಶನ ಕೊಡುವುದಾಗಿ ತಿಳಿಸಿ ವಿಚಾರಣೆಯನ್ನು ಮುಂದೂಡಿದೆ.
Next Story