ಮಾಜಿ ಸ್ಪೀಕರ್ ರಮೇಶ್ ಕುಮಾರ್‌ರಿಂದ ಅರಣ್ಯ ಭೂಮಿ ಒತ್ತುವರಿ ಆರೋಪ ; ಸರ್ವೇ ಕೋರಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಗೊಳಿಸಿದ ಹೈಕೋರ್ಟ್

ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್‌ರಿಂದ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಜಮೀನಿನ ಸರ್ವೇ ಈಗಾಗಲೇ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಕೀಲ ಶಿವಾರೆಡ್ಡಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಸರ್ವೇ ನಡೆಸಲು ನಿರ್ದೇಶನ ಕೋರಿ ಅರ್ಜಿಯನ್ನು ವಕೀಲ ಶಿವಾರೆಡ್ಡಿ ಸಲ್ಲಿಸಿದ್ದರು. ಹೈಕೋರ್ಟ್ ಆದೇಶದಂತೆ ಅರಣ್ಯ ಸಂರಕ್ಷಣಾಧಿಕಾರಿಗೆ ಈಗಾಗಲೇ ಜಂಟಿ ಸರ್ವೇ ವರದಿ ಸಲ್ಲಿಕೆಯಾಗಿದೆ
ಕಾನೂನಿನಂತೆ ಅರಣ್ಯ ಸಂರಕ್ಷಣಾಧಿಕಾರಿ ಸೆ.64 ಅಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸದಾಶಿವರೆಡ್ಡಿ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಈ ವೇಳೆ ಅರ್ಜಿದಾರರ ರಿಟ್ ಊರ್ಜಿತವಲ್ಲವೆಂದು ರಮೇಶ್ ಕುಮಾರ್ ಪರ ವಕೀಲರು ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ಪೀಠ ಈಗಾಗಲೇ ಸರ್ವೇ ವರದಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಿಟ್ ಇತ್ಯರ್ಥಪಡಿಸಿದೆ. ಅಲ್ಲದೆ ವರದಿ ಪ್ರಶ್ನಿಸಲು ರಮೇಶ್ ಕುಮಾರ್‌ರಿಗೆ ಅವಕಾಶ ನೀಡಿದೆ.
Next Story