ನಟ ದರ್ಶನ್ ಗೆ ಸದ್ಯಕಿಲ್ಲ ಮನೆ ಊಟ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
PC :x/@dasadarshan
ಬೆಂಗಳೂರು, ಆ.20: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಮನೆ ಊಟದ ಭಾಗ್ಯವಿಲ್ಲ.
ಮನೆ ಊಟ, ಹಾಸಿಗೆ, ಚಮಚ, ತಟ್ಟೆ(cutlery)ಗಾಗಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಜೈಲು ಅಧಿಕಾರಿಗಳು ಮನೆ ಊಟ ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ವೈದ್ಯಾಧಿಕಾರಿಗಳ ವರದಿ ನೋಡಿ ವಾದ ಮಂಡನೆಗೆ ದರ್ಶನ್ ಪರ ವಕೀಲರು ಕಾಲಾವಕಾಶ ಕೋರಿ ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 5ಕ್ಕೆ ಮುಂದೂಡಿದೆ.
Next Story