ನನಗೆ ಯಾವುದೇ ಶೋಕಾಸ್ ನೋಟಿಸ್ ಬಂದಿಲ್ಲ: ಯತ್ನಾಳ್ ಪ್ರತಿಕ್ರಿಯೆ

ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ನಿರಂತರ ಟೀಕೆ ವಿಚಾರವಾಗಿ ಸೋಮವಾರ ಕೇಂದ್ರ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳರಿಗೆ ನೋಟಿಸ್ ಬಂದಿದೆ ಎಂದು ಮಾಧ್ಯಮಗಳು ವಿಜೃಂಭಿಸುತ್ತಿದೆ. ನನಗೆ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿರುವುದಿಲ್ಲ. ನೋಟಿಸ್ ಬಂದ ಮೇಲೆ ಕೆಲ ವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ ಮತ್ತು ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ʼಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಯತ್ನಾಳ್ ಅವರು ಮತ್ತೆ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಇದು ಗಂಭೀರವಾದ ವಿಚಾರವಾಗಿದ್ದು ನೋಟಿಸ್ ಗೆ ಉತ್ತರ ನೀಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದುʼ ಎಂದು ಶಿಸ್ತು ಪಾಲನಾ ಸಮಿತಿ ಎಚ್ಚರಿಕೆ ನೀಡಿದೆ.
ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳರಿಗೆ ನೋಟೀಸು ಬಂದಿದೆ ಎಂದು ಮಾಧ್ಯಮಗಳು ವಿಜೃಂಭಿಸುತ್ತಿದೆ. ನನಗೆ ಅಧಿಕೃತವಾಗಿ ಯಾವುದೇ ನೋಟೀಸು ಬಂದಿರುವುದಿಲ್ಲ. ನೋಟೀಸು ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು…
— Basanagouda R Patil (Yatnal) (@BasanagoudaBJP) February 10, 2025