ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ : ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
ಬೆಂಗಳೂರು : ‘ದೇಶದಲ್ಲಿ ಎರಡು ರೀತಿಯ ಕಾಂಗ್ರೆಸ್ ಇದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರೀಯತೆಯ ಕಾಂಗ್ರೆಸ್ ಇತ್ತು. ಈಗ ಜನ ವಿರೋಧಿ, ದೇಶ ವಿರೋಧಿ ಕಾಂಗ್ರೆಸ್ ಇದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಮುಂದಾಗಿರುವುದು ಸಲ್ಲ. ಈಗಿನದ್ದು ಜನ ವಿರೋಧಿ ಮತ್ತು ದೇಶ ವಿರೋಧಿ ಕಾಂಗ್ರೆಸ್ ಆಗಿದೆ ಎಂದು ಟೀಕಿಸಿದರು.
ಈ ಸರಕಾರ ಸಂಪೂರ್ಣ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ. ಹಿರಿಯ ಅಧಿಕಾರಿಗಳು ಕಾನ್ಸ್ ಟೇಬಲ್ ರೀತಿ ನಡೆದುಕೊಳ್ಳುತ್ತಿದ್ದಾರೆ. ಯಾರು ನ್ಯಾಯ ಸಮ್ಮತವಾಗಿ ಕೆಲಸ ಮಾಡುತ್ತಿದ್ದಾರೆ ಅವರಿಗೆ ಶಿಕ್ಷೆ ಕೊಡಲಾಗುತ್ತಿದೆ. ಪೊಲೀಸರಿಗೆ ಕಾನೂನಿನ ನಿಷ್ಠೆ ಇರಬೇಕು. ಕಾಂಗ್ರೆಸ್ ನವರಿಗೆ ತಮಗೆ ನಿಷ್ಠೆ ಇರುವ ಪೊಲೀಸ್ ಅಧಿಕಾರಿಗಳು ಬೇಕಾಗಿದ್ದಾರೆ.
ಹೀಗಾಗಿ ಪೊಲೀಸ್ ಇಲಾಖೆಯನ್ನು ಪಕ್ಷಗಳ ಆಧಾರದಲ್ಲಿ ವಿಭಜಿಸುವಂತದ್ದು, ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ನೀಡುವುದರಿಂದ ಅವರ ನೈತಿಕತೆ ಕುಸಿಯುತ್ತಿದೆ. ತಕ್ಷಣವೇ ಈ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ದೊಡ್ಡ ಸಮಸ್ಯೆ ಎದುರಾಗಲಿದೆ ಎಂದು ಎಚ್ಚರಿಸಿದರು.
ಹಲವಾರು ಶಾಕ್ :
ಕಲಬುರಗಿಯಲ್ಲಿ ಮಹಿಳೆಗೆ ರಸ್ತೆಯಲ್ಲಿ ವಿದ್ಯುತ್ ಶಾಕ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರಕಾರ ಕೇವಲ ವಿದ್ಯುತ್ ಶಾಕ್ ಅಷ್ಟೇ ಅಲ್ಲ ಹಲವಾರು ಶಾಕ್ ಗಳನ್ನು ಕೊಟ್ಟಿದೆ. ಬಾಣಂತಿಯರಿಗೆ ಕಪ್ಪುಪಟ್ಟಿಗೆ ಸೇರಿದ ಕಂಪನಿ ಸರಬರಾಜು ಮಾಡಿರುವ ಅವಧಿ ಮೀರಿದ ಔಷಧಗಳನ್ನು ನೀಡಿ ಶಾಕ್ ಕೊಟ್ಟಿದೆ. ಇದು ಈ ಸರಕಾರದಲ್ಲಿ ಸಾಮಾನ್ಯ ಜನರು ಸುರಕ್ಷಿತವಾಗಿಲ್ಲ ಎನ್ನುವುದನ್ನು ತೋರಿಸುತ್ತದೆ. ಕಾನೂನು ಸುವ್ಯವಸ್ಥೆ, ರಸ್ತೆ, ಕುಡಿಯುವ ನೀರು, ಆರೋಗ್ಯ, ವಿದ್ಯುತ್ ಯಾವ ವಿಚಾರದಲ್ಲಿಯೂ ಜನರು ಸುರಕ್ಷಿತವಾಗಿಲ್ಲ ಎಂದು ಹೇಳಿದರು.
ದುರಾಡಳಿತ ಮಿತಿಮೀರಿದೆ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ದುರಾಡಳಿತ ಮಿತಿ ಮೀರುತ್ತಿದೆ. ಕಾನೂನು ಕೈಗೆ ತೆಗೆದುಕೊಳ್ಳಬಾರದು ಎನ್ನುವ ಕನಿಷ್ಠ ಜ್ಞಾನ ಇವರಿಗೆ ಇಲ್ಲ ಎಂದರೆ, ಇವರು ನೂರನೇ ವμರ್Áಚರಣೆ ಮಾಡಿ ಏನು ಪ್ರಯೋಜನ’
-ಬಸವರಾಜ ಬೊಮ್ಮಾಯಿ ಮಾಜಿ ಸಿಎಂ