Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಾರ್ದನ ರೆಡ್ಡಿಯ ಸದಸ್ಯತ್ವ...

ಜನಾರ್ದನ ರೆಡ್ಡಿಯ ಸದಸ್ಯತ್ವ ಅಸಿಂಧುಗೊಳಿಸಿ : ಶೋಕಾಸ್ ನೊಟೀಸ್ ನೀಡಲು ರಮೇಶ್ ಬಾಬು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 March 2024 8:20 PM IST
share
ಜನಾರ್ದನ ರೆಡ್ಡಿಯ ಸದಸ್ಯತ್ವ ಅಸಿಂಧುಗೊಳಿಸಿ : ಶೋಕಾಸ್ ನೊಟೀಸ್ ನೀಡಲು ರಮೇಶ್ ಬಾಬು ಒತ್ತಾಯ

ಬೆಂಗಳೂರು: ಬಿಜೆಪಿ ಜತೆ ಸೇರಿ ಸ್ವಪಕ್ಷದ ಸದಸ್ಯತ್ವ ತ್ಯಜಿಸಿರುವ ಕಾರಣ ವಿಧಾನಸಭಾ ಸ್ಪೀಕರ್ ಅವರು ಸಂವಿಧಾನದಡಿಯಲ್ಲಿ ಕೆಕೆಪಿಪಿ ಜನಾರ್ದನ ರೆಡ್ಡಿ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿ, ಕೂಡಲೇ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್‍ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನದ 10ನೆ ಶೆಡ್ಯೂಲ್ ಅನ್ವಯ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ದೂರು ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಕೆಪಿಪಿ)ದ ಶಾಸಕರಾಗಿರುವ ಜನಾರ್ದನ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿರುವುದಾಗಿ ಹೇಳಿರುವುದು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆಯಾಗಿದೆ. ಒಂದು ಪಕ್ಷ ಮತ್ತೊಂದು ಪಕ್ಷದ ಜತೆ ವಿಲೀನವಾಗಲು ಹಲವು ಪ್ರಕ್ರಿಯೆಗಳಿವೆ. ಚುನಾವಣಾ ಆಯೋಗಕ್ಕೆ ಕೊಟ್ಟಿರುವ ಮಾಹಿತಿ ಪ್ರಕಾರ ಜನಾರ್ದನ ರೆಡ್ಡಿ ಅವರು ತಮ್ಮ ಪಕ್ಷಕ್ಕೆ ಪದಾಧಿಕಾರಿಯಲ್ಲ. ಇದು ನೊಂದಾಯಿತ ರಾಜಕೀಯ ಪಕ್ಷ. ಇದರ ರಾಷ್ಟ್ರೀಯ ಅಧ್ಯಕ್ಷರು ಜೆ.ರಾಮಣ್ಣ. ಇದರಲ್ಲಿ ಅನೇಕ ಪದಾಧಿಕಾರಿಗಳಿದ್ದಾರೆ ಎಂದು ರಮೇಶ್ ಬಾಬು ತಿಳಿಸಿದರು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 2023ರ ಮಾರ್ಚ್ 30ರಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಡಿಟ್ ವರದಿ ಪ್ರಕಾರ ಆ ಪಕ್ಷದಲ್ಲಿರುವ ಮೊತ್ತ 1,320 ರೂ.ಮಾತ್ರ. ಗಣಿ ಖ್ಯಾತಿ ಜನಾರ್ದನ ರೆಡ್ಡಿ ಅವರು ಬೇನಾಮಿ ಹೆಸರಿನಲ್ಲಿ ಪಕ್ಷ ಹುಟ್ಟು ಹಾಕಿ ಈಗ ಬಿಜೆಪಿ ಜತೆ ಪಕ್ಷವನ್ನು ವಿಲೀನಗೊಳಿಸಿದ್ದಾರೆ. ಈ ವಿಚಾರದಲ್ಲೂ ರೆಡ್ಡಿ ಅವರು ಬೇನಾಮಿ ವ್ಯವಹಾರ ನಡೆಸಿರುವುದು ಸ್ಪಷ್ಟವಾಗಿದೆ ಎಂದು ರಮೇಶ್ ಬಾಬು ದೂರಿದರು.

ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಸೇರ್ಪಡೆಯಾಗಿರುವುದು ರಾಷ್ಟ್ಪ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಬಿಜೆಪಿ ಎಲ್ಲಾ ಕಳಂಕಿತರು, ಭ್ರಷ್ಟಾಚಾರ ಆರೋಪ ಹೊತ್ತಿರುವವರನ್ನು ತಮ್ಮ ಪಕ್ಷಕ್ಕೆ ಕರೆದುಕೊಂಡು ಅವರನ್ನು ವಾಶಿಂಗ್ ಮಷಿನ್ ರೀತಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದೆ ಎಂದು ರಮೇಶ್ ಬಾಬು ಆರೋಪಿಸಿದರು.

ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿಯವರು ಭ್ರಷ್ಟಾಚಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ. ಮೋದಿ ಅವರು ತಮ್ಮದು ಸ್ವಚ್ಛ ನಾಯಕತ್ವ ಎಂದು ಹೇಳುತ್ತಾರೆ. ಅದಕ್ಕೆ ವ್ಯತಿರಿಕ್ತವಾಗಿ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ತಮಗೆ ತಾವೇ ಮಸಿ ಬಳಿದುಕೊಂಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ನಾಯಕರು ಸಾರ್ವಜನಿಕರಿಗೆ ಸ್ಪಷ್ಟನೆ ನೀಡಬೇಕು ಎಂದು ರಮೇಶ್‍ಬಾಬು ತಿಳಿಸಿದರು.

ಬಿಜೆಪಿ ಅಂದರೆ ‘ಬಾಂಡ್ ಜನತಾ ಪಕ್ಷ’: ‘ಬಿಜೆಪಿ ಇತರೆ ಪಕ್ಷಗಳ ನಾಯಕರನ್ನು ಹೇಗೆ ಖರೀದಿ ಮಾಡುತ್ತಿದೆ ಅಂದರೆ, ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಬೆದರಿಕೆ ಹಾಕಿ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಮೋದಿ ಅವರು ತಾನು ತಿನ್ನಲ್ಲ ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‍ಗಳನ್ನು ಬಹಿರಂಗಗೊಳಿಸುವ ಮೂಲಕ ಬಿಜೆಪಿಯ ಮುಖವಾಡ ಕಳಚಿದೆ. ಆ ಮೂಲಕ ಬಿಜೆಪಿ ಬೆತ್ತಲಾಗಿದೆ. ಬಿಜೆಪಿ ಇನ್ನು ಮುಂದೆ ಬಾಂಡ್ ಜನತಾ ಪಕ್ಷವಾಗಿ ಹೊರಹೊಮ್ಮಿದೆ’ ಎಂದು ರಮೇಶ್ ಬಾಬು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X