ಕರವೇ ನಾರಾಯಣಗೌಡಗೆ ಜಾಮೀನು
ಬೆಂಗಳೂರು: ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ 2017ರಲ್ಲಿ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಬೆಂಗಳೂರಿನ 30ನೆ ಎಸಿಎಂಎಂ ನ್ಯಾಯಾಲಯ ಬುಧವಾರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಳೇ ಪ್ರಕರಣ ಮೇಲೆ ನಗರದ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಜ.9ರಂದು ನಾರಾಯಣಗೌಡರನ್ನು ಪುನಃ ಬಂಧಿಸಿದ್ದರು.
ಪ್ರಕರಣ ಸಂಬಂಧ ಕರವೇ ನಾರಾಯಣಗೌಡ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಜ.10ಕ್ಕೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಜಾಮೀನು ನೀಡಿ ನ್ಯಾಯಾಲಯದ ಆದೇಶ ಹೊರಡಿಸಿದೆ.
Next Story