ಡಾ.ಬಾಬು ಕೀಲಾರಗೆ ‘ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ಉದ್ಯಮಿ ಡಾ.ಬಾಬು ಕೀಲಾರ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಳೆದ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಶನಿವಾರ ಪ್ರದಾನ ಮಾಡಿದರು.
ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮ ಮೂಲದ ಡಾ.ಬಾಬು ಕೀಲಾರ ಅವರು ಸಂಕೀರ್ಣ ವಿಭಾಗದಲ್ಲಿ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಅನಿವಾಸಿ ಕನ್ನಡಿಗರು ಮಾಡಿರುವ ಸಮಾಜ ಸೇವೆ ಗುರುತಿಸಿ ಈ ವಿಭಾಗದಲ್ಲಿ ಆಯ್ಕೆ ಮಾಡಲಾಗಿತ್ತು. ಕಳೆದ ನವೆಂಬರ್ 1 ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು. ಆದರೆ ಅನ್ಯ ಕಾರಣಗಳಿಂದ ಅವರು ಕಾರ್ಯಕ್ರಮಕ್ಕೆ ಬಂದಿರಲಿಲ್ಲ. ಇವತ್ತು ಪತ್ನಿ ಸಮೇತರಾಗಿ ಆಗಮಿಸಿ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಬಾಬು ಕೀಲಾರ ಅವರ ಪತ್ನಿ ವಸುಧಾ ಬಾಬು ಉಪಸ್ಥಿತರಿದ್ದರು.