ಕರ್ನಾಟಕ ಬಂದ್ | ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸಹಿತ ಹಲವರು ಪೊಲೀಸರ ವಶಕ್ಕೆ

PC | PTI
ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಕರೆ ನೀಡಿದ್ದರು.
ರಾಜ್ಯಾದ್ಯಂತ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವಾಟಾಳ್ ನಾಗರಾಜ್ ಅವರು ಟೌನ್ ಹಾಲ್ಗೆ ಆಗಮಿಸುತ್ತಿದ್ದಂತೆ ಅವರನ್ನು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Next Story