ಪತ್ರಕರ್ತರ ಮಾಸಾಶನ ಹೆಚ್ಚಳ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 15 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ ಮಾಸಾಶನ 12 ಸಾವಿರ ರೂಪಾಯಿ ಇದ್ದು, ಇದನ್ನು 15 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ, ಕುಟುಂಬ ಮಾಸಾಶನವನ್ನು 6,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.
ಅದೇ ರೀತಿ, ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ʻಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿʼ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
Next Story