ಕೆಎಸ್ಸಾರ್ಟಿಸಿ ಮುಕುಟಕ್ಕೆ 16 ಪ್ರಶಸ್ತಿಗಳ ಗರಿ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ನೂತನ ಸಾರಿಗೆ ಉಪಕ್ರಮಗಳಾದ ‘ಶಕ್ತಿ ಯೋಜನೆ ಪ್ರವಾಸ’ ವಿಡಿಯೋ, ಪಲ್ಲಕ್ಕಿ ಮತ್ತು ಅಶ್ವಮೇಧ ಬ್ರಾಂಡಿಂಗ್ ವಿಡಿಯೋಗಳಿಗೆ ರಾಷ್ಟ್ರದ ಮಟ್ಟದ 8 ವೀಡಿಯಾ, 5 ಎಮ್ಕ್ಯೂಬ್ ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಸಂಸ್ಥೆ, ‘ಪಲ್ಲಕ್ಕಿ’ ಬ್ರಾಂಡಿಂಗ್‍ಗಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್‍ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಪ್‍ಲೈನ್)ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ‘ಶಕ್ತಿ ಯೋಜನೆಗೆ ಪ್ರವಾಸ-ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
ಅಶ್ವಮೇಧ ಬ್ರಾಂಡಿಂಗ್‍ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಪಲ್ಲಕ್ಕಿ ಬ್ರಾಂಡಿಂಗ್‍ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್‍ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್‍ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ ಅತ್ಯುತ್ತಮ ವೀಡಿಯೊ ಕಂಟೆಂಟ್. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟಪ್ರ್ರೈಸ್ ಪ್ರಶಸ್ತಿ ಸಂದಿದೆ.
ಎಮ್ಕ್ಯೂಬ್ ವಿಭಾಗಗಳಲ್ಲಿ: ಬ್ರಾಂಡಿಂಗ್‍ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್. ಬ್ರಾಂಡಿಂಗ್‍ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್. ಬ್ರಾಂಡಿಂಗ್‍ಗಾಗಿ ಶ್ರೇಷ್ಠ ಆನ್‍ಲೈನ್ ಪಿಆರ್ ಕ್ಯಾಂಪೇನ್ ಪ್ರಶಸ್ತಿ ಬಂದಿದೆ.
ನಿಗಮವು ‘ಸಾರಿಗೆ ಸಂಜೀವಿನಿ-ನೌಕರರ ಹೃದಯ ರೋಗ ತಪಾಸಣೆ ಮತ್ತು ರಸ್ತೆ ಸುರಕ್ಷತೆ ಉಪಕ್ರಮ’ ಕ್ಕಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದಿರುತ್ತದೆ. ವಿಡಿಯೋ ಮತ್ತು ಎಮ್ಕ್ಯೂಬ್ ಪ್ರಶಸ್ತಿಗಳನ್ನು ಹರಿಯಾಣದ ಗುರುಗಾಂವ್‍ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್‍ಲೈನ್‍ನಲ್ಲಿ ಪ್ರದಾನ ಮಾಡಲಾಯಿತು. ಸ್ಕೋಚ್ ಪ್ರಶಸ್ತಿ ಸಮಾರಂಭವು-2024ರ ಸೆಪ್ಟೆಂಬರ್ 21ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.