ಜ.26ರ ಬೆಳಗ್ಗೆ 6 ಗಂಟೆಯಿಂದಲೇ ಮೆಟ್ರೋ ಸಂಚಾರ ಪ್ರಾರಂಭ

ಬೆಂಗಳೂರು : ಗಣರಾಜ್ಯೋತ್ಸವ ಅಂಗವಾಗಿ ಜ.26ರಂದು ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಯ ಬದಲಿಗೆ ಬೆಳಗ್ಗೆ 6 ಗಂಟೆಗೆ ಎಲ್ಲ ಟರ್ಮಿನಲ್‍ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‍ನಿಂದ ಪ್ರಾರಂಭವಾಗಲಿದೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.
ಲಾಲ್‍ಬಾಗ್ ಪುಷ್ಪ ಪ್ರದರ್ಶನ ಮತ್ತು ಮಾದಾವರದ ಬಿಐಇಸಿನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಕ್ಕೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ನಿಗಮವು ಅಂದು ಹಸಿರು ಮತ್ತು ನೇರಳೆ ಮಾರ್ಗಗಳಲ್ಲಿ 20 ಹೆಚ್ಚುವರಿ ಟ್ರಿಪ್‍ಗಳನ್ನು ನಡೆಸುತ್ತದೆ.
ಸಾರ್ವಜನಿಕರು ಲಾಲ್‍ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್‍ಗಳು, ಸ್ಮಾರ್ಟ್ ಕಾರ್ಡ್ (ಸಿಎಸ್‍ಸಿ). ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್‍ಸಿಎಂಸಿ) ಮತ್ತು ಕ್ಯೂಆರ್ ಟಿಕೆಟ್‍ಗಳನ್ನು ಬಳಸಿ ಹಿಂತಿರುಗಬಹುದು. ಲಾಲ್‍ಬಾಗ್ ಮೆಟ್ರೋ ನಿಲ್ದಾಣದಲ್ಲಿ ನಿಗಮವು ಟೋಕನ್‍ಗಳ ಬದಲಿಗೆ ಪ್ರಯಾಣಿಕರ ತ್ವರಿತ ಚಲನೆಗಾಗಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಫ್ಯಾಟ್ 30 ರೂ.ರ ಪೇಪರ್ ಟಿಕೆಟ್‍ಗಳನ್ನು ವಿತರಿಸುತ್ತದೆ.
ಇದನ್ನು ನಗದು ಪಾವತಿಸಿ ಖರೀದಿಸಬಹುದು. ಖರೀದಿಸಿದ ದಿನದಂದು ಲಾಲ್‍ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಪೇಪರ್ ಟಿಕೆಟ್‍ಗಳು ಮಾತ್ರ ಮಾನ್ಯವಾಗಿರುತ್ತವೆ. ಲಾಲ್‍ಬಾಗ್ ಮೆಟ್ರೋ ನಿಲ್ದಾಣದಲ್ಲಿ ಈ ಅವಧಿಯಲ್ಲಿ ಟೋಕನ್‍ಗಳನ್ನು ನೀಡಲಾಗುವುದಿಲ್ಲ. ನಮ್ಮ ಮೆಟ್ರೋದ ಎಲ್ಲ ಪುಯಾಣಿಕರು, ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.