ಸಚಿವ ಸಂತೋಷ್ ಲಾಡ್ ಸಾರಥ್ಯ: ಕಾಶ್ಮೀರದಿಂದ 178 ಕನ್ನಡಿಗರು ಇಂದು ತಾಯ್ನಾಡಿಗೆ
ಶ್ರೀನಗರದಿಂದ ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸರಕಾರ

ಬೆಂಗಳೂರು, ಎ.24: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿದೆ.
ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸಕಲ ವ್ಯವಸ್ಥೆಗಳನ್ನು ಮಾಡಿದ್ದಾರೆ. ಅದರಂತೆ 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.
ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದೆ.
Next Story