ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ, ತೃತೀಯ ಸ್ಥಾನ ಪಡೆದ ಅಂಕಿತಾ, ನವನೀತ್ಗೆ ಸಚಿವರ ಸನ್ಮಾನ
ಡಿಸಿಎಂ ಶಿವಕುಮಾರ್ ರಿಂದ 5ಲಕ್ಷ ರೂ., 2 ಲಕ್ಷ ರೂ. ಪ್ರೋತ್ಸಾಹ ಧನ
ಅಂಕಿತಾ ಹಾಗೂ ನವನೀತ್ ಅವರನ್ನು ಸನ್ಮಾನಿಸಿದ ಡಿಕೆ.ಶಿವಕುಮಾರ್
ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ ಹಾಗೂ ತೃತೀಯ ಸ್ಥಾನ ಪಡೆದ ಮಂಡ್ಯದ ನವನೀತ್ಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿದರು.
ಮಂಗಳವಾರ ನಗರದಲ್ಲಿ ಮೊರಾರ್ಜಿ ವಸತಿ ಶಾಲೆಯಲ್ಲಿ ಕಲಿತ ಇಬ್ಬರು ವಿದ್ಯಾರ್ಥಿಗಳನ್ನು ಸಚಿವ ಮಹದೇವಪ್ಪ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕವಾಗಿ ಗೌರವಿಸಿದರು. ಅಲ್ಲದೆ, ಇಬ್ಬರು ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ರಾಜ್ಯ ಸರಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
5ಲಕ್ಷ ರೂ.ಪ್ರೋತ್ಸಾಹ ಧನ: ಮೊದಲ ಸ್ಥಾನ ಪಡೆದ ಅಂಕಿತಾ ಅವರಿಗೆ 5ಲಕ್ಷ ರೂ. ಹಾಗೂ ತೃತೀಯ ಸ್ಥಾನ ಗಳಿಸಿದ ನವನೀತ್ಗೆ 2 ಲಕ್ಷ ರೂ.ಉಡುಗೊರೆಯನ್ನು ಪ್ರಕಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೂಡಲೇ ಇಬ್ಬರು ವಿದ್ಯಾರ್ಥಿಗಳಿಗೆ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.
ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, 10ನೆ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆ ಅಂಕಿತಾ 625ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ ಎಂದರು.
‘ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5ಲಕ್ಷ ರೂ.ನಗದು ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಸರಕಾರಿ ಶಾಲೆಯಲ್ಲಿ ಓದಿ ಮೂರನೆ ಸ್ಥಾನ ಪಡೆದಿದ್ದು, ಈತನಿಗೆ 2ಲಕ್ಷ ರೂ. ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಅವರು ಇದೇ ವೇಳೆ ಹಾರೈಸಿದರು.
‘ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ.