ಮುಡಾ ಪ್ರಕರಣ | ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಹೈಕೋರ್ಟ್‌ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
Next Story