ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಸಿಕ್ಕಿದ ಹಿನ್ನೆಲೆ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾರೆ.
ಅ.15ರ ಮಂಗಳವಾರದಂದು ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗಳಿಗೆ ತಡವಾಗಿ ತಲುಪಿದ್ದರಿಂದ ಮಂಗಳವಾರದಂದು ಬಿಡುಗಡೆ ಆಗಿರಲಿಲ್ಲ.
ಬುಧವಾರದಂದು ಬಿಡುಗಡೆಯಾಗುತ್ತಿದ್ದಂತೆ ಶಾಸಕ ಮುನಿರತ್ನ ಅವರು ಕಾರಿನಲ್ಲಿ ತಮ್ಮ ವೈಯಾಲಿಕಾವಲ್ ನಿವಾಸಕ್ಕೆ ತೆರಳಿದ್ದು, ಸ್ಥಳದಲ್ಲಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
Next Story