ಬೆಂಗಳೂರು: ಪತ್ನಿಯ ಕಿರುಕುಳ ಆರೋಪ; ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಬೆಂಗಳೂರು, ಡಿ.14: ಪತ್ನಿಯ ಕಿರುಕುಳದಿಂದ ಬೇಸತ್ತು ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದ ಸಾಫ್ಟ್ವೇರ್ ಉದ್ಯೋಗಿ ಅತುಲ್ ಆತ್ಮಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತಿಪ್ಪಣ್ಣ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದರು. ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು, ಕಲಹ ಉಂಟಾಗಿದೆ ಎನ್ನಲಾಗಿದೆ.
ಮಾವ ಹಾಗೂ ಪತ್ನಿ ವಿರುದ್ಧ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಎನ್ಎಸ್ 108 ಅಡಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story