Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕೋನಾರ್ಕ್’ ಮಾದರಿಯಲ್ಲಿ ಚಾಲುಕ್ಯ ಉತ್ಸವ...

‘ಕೋನಾರ್ಕ್’ ಮಾದರಿಯಲ್ಲಿ ಚಾಲುಕ್ಯ ಉತ್ಸವ : ಸಚಿವ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ18 March 2025 10:22 PM IST
share
‘ಕೋನಾರ್ಕ್’ ಮಾದರಿಯಲ್ಲಿ ಚಾಲುಕ್ಯ ಉತ್ಸವ : ಸಚಿವ ತಂಗಡಗಿ

ಬೆಂಗಳೂರು : ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಚಾಲುಕ್ಯ ಉತ್ಸವ ಆಚರಣೆ ಸಂಬಂಧ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಬಳಿಕ ಮಾತನಾಡಿದ ಅವರು, ‘2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನು ಒಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು’ ಎಂದು ಹೇಳಿದರು.

ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಸಿಎಂ ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ. ವರ್ಷಾಂತ್ಯಕ್ಕೆ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಶಾಸಕ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ‘ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು’ ಎಂದು ಸಲಹೆ ನೀಡಿದರು.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ ಎಚ್.ವೈ.ಮೇಟಿ, ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್, ಉಮಾಶ್ರೀ, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X