Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಭರತ್...

ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಭೇಟಿ

ಉಗ್ರರನ್ನು ಸದೆಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 April 2025 10:10 AM IST
share
ಪಹಲ್ಗಾಮ್ ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ನಿವಾಸಕ್ಕೆ ಸಿಎಂ ಭೇಟಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿ, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹೇಯ ಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧು ಬಂಗಾರಪ್ಪ ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X