ಅರಮನೆ ಆಸ್ತಿ ವಿಚಾರ: ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ (ಜ.29) ಒಪ್ಪಿಗೆ ಸೂಚಿಸಿದ್ದಾರೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಟಿಡಿಆರ್ ನೀಡದಿರಲು ರಾಜ್ಯ ಸರಕಾರ ತೀರ್ಮಾನಿಸಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ಅರಮನೆ ಭೂ ಕಬಳಿಕೆ ಮತ್ತು ನಿಯಂತ್ರಣ ಅಧ್ಯಾದೇಶ 2025ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
3 ಸಾವಿರ ಕೋಟಿ ರೂ. ಮೌಲ್ಯದ ಬೆಂಗಳೂರು ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ಮೈಸೂರು ರಾಜಮನೆತನ ಮತ್ತು ರಾಜ್ಯ ಸರಕಾರದ ನಡುವೆ ಶೀತಲ ಸಮರ ಏರ್ಪಟ್ಟಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ನಿರ್ಣಯ ಕೈಗೊಂಡಿತ್ತು.
Next Story