ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ : ಸಾಕ್ಷಿ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವಿಚಾರಣೆ ಮುಂದೂಡಲು ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ನಿರಾಕರಿಸಿ, ಪ್ರತಿವಾದಿ ಸಂತ್ರಸ್ತ ಮಹಿಳೆಗೆ ನೋಟಿಸ್ ಜಾರಿಗೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ದೋಷಾರೋಪ ಪಟ್ಟಿ ಸಲ್ಲಿಸಲು ಎಸ್‌ಐಟಿ ಪೊಲೀಸ್ ಠಾಣೆಯಲ್ಲ. ಹೀಗೆ ಸಾಕ್ಷ್ಯ ವಿಚಾರಣೆ ಮುಂದೂಡಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದರು.ವಾದ ಆಲಿಸಿದ ಪೀಠ ಈ ಹಂತದಲ್ಲಿ ಮಧ್ಯಂತರ ಆದೇಶ ನೀಡಲು ಸಾದ್ಯವಿಲ್ಲ. ಮೊದಲು ಸಂತ್ರಸ್ತ ಮಹಿಳೆ ನೋಟಿಸ್ ಜಾರಿಗೆ ಸೂಚಿಸಿ ವಿಚಾರಣೆ ಮುಂದೂಡಿದೆ.
Next Story