ಸಂಪುಟ ಪೂರ್ತಿ ಡಿಸಿಎಂ ಆಗಲಿ ಎಂದರೆ ಹೇಗೆ? : ಪ್ರಿಯಾಂಕ್ ಖರ್ಗೆ
ಬೆಂಗಳೂರು : ‘ಮುಖ್ಯಮಂತ್ರಿ ಅವರನ್ನು ಬಿಟ್ಟು ಸಚಿವ ಸಂಪುಟ ಎಲ್ಲರೂ ಉಪಮುಖ್ಯಮಂತ್ರಿ ಆಗಲಿ ಎಂದರೆ ಹೇಗೆ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಕುರಿತು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ಅವರ ವೈಯಕ್ತಿಕ ವಿಚಾರ. ಎಲ್ಲರಿಗೂ ತಮ್ಮ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ, ಪಕ್ಷದ ಹೈಕಮಾಂಡ್ ಬಳಿ ಹೋಗಿ ಕೇಳಲಿ, ಯಾರು ಬೇಡ ಅಂದಿಲ್ಲ ಎಂದು ಪರೋಕ್ಷ ತಿರುಗೇಟು ನೀಡಿದರು.
ಉಪಮುಖ್ಯಮಂತ್ರಿ ಮಾಡುವುದರಿಂದಲೇ ಎಲ್ಲ ಆಗುತ್ತೆ ಎನ್ನುವುದಾದರೆ ಮುಖ್ಯಮಂತ್ರಿ ಅವರನ್ನು ಮಾತ್ರ ಬಿಟ್ಟು ಇಡೀ ಸಚಿವ ಸಂಪುಟ ಉಪಮುಖ್ಯಮಂತ್ರಿ ಆಗಲಿ ಅಂದರೆ ಆಗುತ್ತಾ?. ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳು ಬಂದಿಲ್ಲ. ನಾಲ್ಲೈದು ಸ್ಥಾನ ಕಡಿಮೆ ಬಂದಿವೆ. ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
Next Story