Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಳ ಸಮುದಾಯಗಳು ಸಂಘಟಿತರಾಗಲು ಇದು ಸಕಾಲ...

ಕೆಳ ಸಮುದಾಯಗಳು ಸಂಘಟಿತರಾಗಲು ಇದು ಸಕಾಲ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 April 2025 9:13 PM IST
share
ಕೆಳ ಸಮುದಾಯಗಳು ಸಂಘಟಿತರಾಗಲು ಇದು ಸಕಾಲ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ, ಆರ್ಥಿಕ ಸಮೀಕ್ಷಾ (ಜಾತಿಗಣತಿ) ವರದಿಯ ವಿರುದ್ಧ ಸಮಾಜದಲ್ಲಿ ಬೊಬ್ಬೆ ಎದ್ದಿರುವ ಈ ದಿನಗಳಲ್ಲಿ ಕೆಳ ಸಮುದಾಯದ ಜನರು ಹೆಚ್ಚು ಸಂಘಟಿತರಾಗುವ ಅಗತ್ಯ ಇದ್ದು, ಎಲ್ಲರೂ ಒಂದುಗೂಡಲು ಇದು ಸಕಾಲ ಎಂದು ಸಂಸ್ಕೃತಿ ಚಿಂತಕ ಪ್ರೊ.ಎಸ್. ಜಿ.ಸಿದ್ದರಾಮಯ್ಯ ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ.

ಶುಕ್ರವಾರ ನಗರದ ಸಂಸ ಬಯಲು ರಂಗಮಂದಿರದಲ್ಲಿ ‘ಅಂಕ ಸಂಸ್ಥೆ’ ಮತ್ತು ಚಿರಂತ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಅಂಬೇಡ್ಕರ್ ಹಾಡಿನ ಹಣತೆ ಹಾಗೂ ಅಂಕ ಚಿರಂತ’, ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೋಷಿತ, ದಮನಿತ ಸಮುದಾಯಗಳು ಹಿಂದಿಗಿಂತಲೂ ಇಂದು ಹೆಚ್ಚು ಸಂಘಟಿತರಾಗುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯ ಬಗ್ಗೆ ಮೇಲ್ಜಾತಿಯವರ ನಡವಳಿಕೆ ಜಾತಿಯ ಅಹಂಕಾರದ ಪ್ರತೀಕವಾಗಿದೆ. ಇದನ್ನು ತಳ ಸಮುದಾಯದವರು ಅರ್ಥ ಮಾಡಿಕೊಳ್ಳಬೇಕು ಎಂದ ಅವರು, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ತತ್ವಗಳು ಬಹುತ್ವ ಭಾರತದ ಪ್ರತೀಕ. ಇಂದು ಆ ಬಹುತ್ವವನ್ನು ಉಳಿಸಿಕೊಳ್ಳುವ ಮೂಲಕ ಬಹು ಸಂಸ್ಕೃತಿ, ಬಹುಧರ್ಮದ ಭಾರತವನ್ನು ಗೌರವಿಸಬೇಕಿದೆ ಎಂದು ಹೇಳಿದರು.

ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಸ್.ಮೂರ್ತಿ, ‘ದಲಿತರ ಏಳ್ಗೆಯಲ್ಲಿ ದಲಿತೇತರ ಪಾತ್ರ ಕುರಿತು ಉಪನ್ಯಾಸ ನೀಡಿ, ಜನಪದ ಸಂಸ್ಕೃತಿ ಈಗಿನ ಅಕ್ಷರ ಸಂಸ್ಕೃತಿಗಿಂತ ಮಿಗಿಲು. ಅಕ್ಷರ ಸಂಸ್ಕೃತಿ ಸಮಾಜವನ್ನು ಸಂಕುಚಿತ ಭಾವವನ್ನು ಹೆಚ್ಚಿಸುತ್ತಿದೆ. ಜನಪದ ಸಂಸ್ಕೃತಿ ಎಲ್ಲರನ್ನೂ ಒಳಗೊಳ್ಳುತಿತ್ತು. ನಾವಿಂದು ಆ ಸಂಸ್ಕೃತಿಯತ್ತ ಮರಳಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಜಾತಿ ಅನ್ನೋದು ಶುದ್ಧ ಸುಳ್ಳು. ಜಾತಿ ಪರಂಪರೆಯಿಂದ ಬಂದಿದ್ದಲ್ಲ ನಾವೇ ಸೃಷ್ಟಿಸಿಕೊಂಡಿದ್ದು. ಅದನ್ನು ತಿರಸ್ಕರಿಸಿ ನಾವು ಮನುಷ್ಯರಾಗಬೇಕು. ಸಮಾಜವನ್ನು ಒಡೆಯುವವರ ನಡುವೆ ನಾವು ಪದ, ಹಾಡು, ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟುವತ್ತ ಆದ್ಯ ಗಮನ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತ ರಾಜು ಮಳವಳ್ಳಿ, ಡಿಂಗ್ರಿ ನರಸಪ್ಪ, ಸಿ.ಕೆ.ಗುಂಡಣ್ಣ, ಕೆಂಪಮ್ಮ ಕಾರ್ಕಹಳ್ಳಿ, ಬಂಡ್ಲಳ್ಳಿ ವಿಜಯಕುಮಾರ್, ಎನ್.ಮುನಿಸ್ವಾಮಿ, ಹುಲಿಕುಂಟೆ ಮೂರ್ತಿ, ಟಿ.ಲಕ್ಷ್ಮೀನಾರಾಯಣ, ನರೇಂದ್ರಬಾಬು, ಮಾಲೂರು ಆನಂದ್, ನಾಗರಾಜು ಪಾವಗಡ ಮತ್ತಿತರರಿಗೆ ಡಾ.ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಅಂಕ ಸಂಸ್ಥೆ ಅಧ್ಯಕ್ಷ ಸಬ್ಬನಹಳ್ಳಿ ರಾಜು, ಚಿರಂತನ ಟ್ರಸ್ಟ್ ಅಧ್ಯಕ್ಷ ಭಾರತೀಪುರ ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಛಲವಾದಿ ಸೇರಿದಂತೆ ಇನ್ನಿತರರು ಹಾಜರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X