ಸಂಸದ ಕುಮಾರ್ ನಾಯಕ್ ರಾಜೀನಾಮೆ ಪಡೆಯಲು ಆರ್.ಅಶೋಕ್ ಆಗ್ರಹ

ಬೆಂಗಳೂರು : ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಅವರ ರಾಜೀನಾಮೆಯನ್ನೂ ಕೂಡಲೇ ಪಡೆಯಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು, ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿಗೆ ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಆಗಿರುವ ಪ್ರಕರಣದಲ್ಲಿ ಅಂದಿನ ಮೈಸೂರು ಜಿಲ್ಲಾಧಿಕಾರಿ ಮತ್ತು ಹಾಲಿ ಸಂಸದ ಕುಮಾರ್ ನಾಯಕ ಕರ್ತವ್ಯ ಲೋಪ ಎಸಗಿದ್ದಾರೆಂದು ಲೋಕಾಯುಕ್ತ ವರದಿಯಲ್ಲಿ ಸಾಬೀತಾಗಿದೆ ಎಂದು ಉಲ್ಲೇಖಿಸಿದ್ದಾರೆ.
‘ಅಲ್ಲದೆ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಸಂಬಂಧ ಲೋಕಾಯುಕ್ತ ವರದಿಯಲ್ಲಿ ಶಿಫಾರಸು ಮಾಡಿರುವಂತೆ ಕುಮಾರ್ ನಾಯಕ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆರ್.ಅಶೋಕ್ ರಾಜ್ಯ ಸರಕಾರವನ್ನ ಒತ್ತಾಯಿಸಿದ್ದಾರೆ.
Next Story