ರೇಣುಕಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳಾದ ನಟಿ ಪವಿತ್ರಾ ಗೌಡ ಹಾಗೂ ಟೆಕ್ಕಿ ಪ್ರದೂಷ್ ಮಂಗಳವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಈ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಮೊದಲನೇ ಆರೋಪಿಯಾಗಿದ್ದರೆ, ಪ್ರದೂಷ್ ನಾಲ್ಕನೇ ಆರೋಪಿ ಆಗಿದ್ದಾನೆ. ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಇವರಿಬ್ಬರು ಕಳೆದ ಜೂನ್ 20ರಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.
ಇದೇ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಡಿ.13ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ದರ್ಶನ್ ಸದ್ಯ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story