ಕೆಎಸ್ಸಾರ್ಟಿಸಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪ್ರದಾನ
ಬೆಂಗಳೂರು : ಶನಿವಾರ ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಯ ಅಧಿಕಾರಿ ಡಾ.ಲತಾ ಟಿ.ಎಸ್. ಅವರಿಗೆ ವಿತರಿಸಿದರು.
ರಾಜ್ಯದ ಸರಕಾರಿ ಸಂಸ್ಥೆಗಳ ಪೈಕಿ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಮಾಡಿರುವ ಕೆಎಸ್ಸಾರ್ಟಿಸಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿಯ ಲಭಿಸಿದೆ. ನಿಗಮವು ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಸಂಸ್ಥೆಗೆ ಪ್ರಶಸ್ತಿ ನೀಡಲಾಯಿತು.
ಇದೇ ವೇಳೆ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ, ಎಸ್.ಆರ್.ಉಮಾಶಂಕರ್, ಮಂಜುಳಾ ಎಸ್.ನಾಯಕ್ ಸೇರಿದಂತೆ ಮತ್ತಿತರರು ಇದ್ದರು.
Next Story