ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎಸ್.ರಾಚಯ್ಯ ಪ್ರಮಾಣವಚನ
ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನೇಮಕಗೊಂಡಿರುವ ಎಸ್.ರಾಚಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹೈಕೋರ್ಟ್ ಪ್ರಧಾನ ಪೀಠದಲ್ಲಿ ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಹೈಕೋರ್ಟ್ನ ನ್ಯಾಯಮೂರ್ತಿ, ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಇತರರು ಇದ್ದರು.
ಎಸ್.ರಾಚಯ್ಯ 2021ರಲ್ಲಿ ಹೆಚ್ಚುವರಿ ನ್ಯಾಯ ಮೂರ್ತಿಯಾಗಿ ನೇಮಕಗೊಂಡಿದ್ದರು. ಅವರನ್ನು ಖಾಯಂಗೊಳಿಸುವಂತೆ ಅಕ್ಟೋಬರ್ ಮೊದಲ ವಾರದಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಅದರಂತೆ ಅ.24ರಂದು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿತ್ತು
Next Story