ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಬಳಿಗೆ ಏಕಾಏಕಿ ನುಗ್ಗಿದ ವ್ಯಕ್ತಿ ಪೊಲೀಸ್ ವಶಕ್ಕೆ
Photo: ANI
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನುಗ್ಗಲು ಯತ್ನಸಿದ ಘಟನೆ ಶುಕ್ರವಾರ ವರದಿಯಾಗಿದೆ.
ಮೈಸೂರು ಮೂಲದ ಪರಶುರಾಮ್ ಎಂಬಾತ ಕರ ಪತ್ರ ಹಿಡಿದು ಮುಖ್ಯಮಂತ್ರಿ ಬಳಿ ನುಗ್ಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕೆಪಿಎಸ್ಸಿ ಆದೇಶ ವಿಳಂಬದ ಬಗ್ಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ನುಗ್ಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ
ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story