ಲೈಂಗಿಕ ಹಗರಣ: ಪ್ರಜ್ವಲ್ ರೇವಣ್ಣಗೆ ಜೂ.24ರವರೆಗೆ ನ್ಯಾಯಾಂಗ ಬಂಧನ
ಪ್ರಜ್ವಲ್ ರೇವಣ್ಣ
ಬೆಂಗಳೂರು, ಜೂ.10: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿದೆ.
ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ ಐಟಿ ಪೊಲೀಸರು ಇಂದು ಹಾಜರುಪಡಿಸಿದರು.
ಈ ವೇಳೆ ಎಸ್ ಐಟಿ ಪೊಲೀಸರು ಪ್ರಜ್ವಲ್ ರೇವಣ್ಣರ ವಿಚಾರಣೆ ಮುಗಿದಿರುವ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಕಸ್ಟಡಿಗೆ ಅವಶ್ಯಕತೆ ಇಲ್ಲವೆಂದ ಕೋರ್ಟ್ ಗಮನಕ್ಕೆ ತಂದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜೂ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
Next Story